ಬಂಟ್ವಾಳ:ತಾಲ್ಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರು ಎಂಬಲ್ಲಿ ಸ್ಥಳೀಯ ನಿವಾಸಿ ಬಾಪಾ ಕುನ್ನಿ(70) ಎಂಬವರಲ್ಲಿ ಶಂಕಿತ ಎಚ್1ಎನ್1 ಸೋಂಕು ಪ್ರಕರಣ ಪತ್ತೆಯಾಗಿದೆ. ಇವರು ಪದೇ ಪದೇ ಬೆಂಗಳೂರಿಗೆ ಹೋಗಿ ಬರುತ್ತಿದ್ದು, ಇತ್ತೀಚೆಗೆ ಕೆಮ್ಮು ಮತ್ತು ಜ್ವರಬಾಧೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ಸಕರ್ಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
