ಬಂಟ್ವಾಳ : ಬಿ.ಸಿ ರೋಡಿನಲ್ಲಿ ಮಾ.2ರಂದು ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂಬ ಆರೋಪದಲ್ಲಿ ರಾ.ಸ್ವ.ಸೇ.ಸಂಘದ ದಕ್ಷಿಣ ಮಧ್ಯಕ್ಷೇತ್ರೀಯ ಸಂಪರ್ಕ ಪ್ರಮುಖ್ ಡಾ.ಪ್ರಭಾಕರ ಭಟ್ರವರ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ಬಿ.ಸಿ ರೋಡಿನ ಶಾಂತಿಯಂಗಡಿ ಪರಿಸರದ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂಬವರ ದೂರಿನಂತೆ ಬಂಟ್ವಾಳ ನಗರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
