ಬೆಂಗಳೂರು: ಚರ್ಚ್‍ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ವಿಚಾರಣೆಗಾಗಿ ಬಿಹಾರದ ಪಟನಾ ಜೈಲಿನಲ್ಲಿರುವ ಇಬ್ಬರು ಉಗ್ರರನ್ನು ವಶಕ್ಕೆ ಪಡೆದಿರುವ ನಗರ ಪೋಲೀಸರು ಬೆಂಗಳೂರಿಗೆ ಕರೆ ತರುತ್ತಿದ್ದಾರೆ. ನರೇಂದ್ರ ಮೋದಿ ಪಾಟನಾದ ಗಾಂಧಿ ಮೈದಾನದಲ್ಲಿ 2013ರ ಅ.27ರಂದು ಲೋಕಸಭೆ ಚುನಾವಣೆ ಪ್ರಚಾರ ರ್ಯಾಲಿ ನಡೆಸುತ್ತಿದ್ದ ವೇಳೆ 10 ಬಾಂಬ್ ಸ್ಫೋಟ ಸಂಭವಿಸಿದ್ದವು. ಐವರು ಮೃತಪಟ್ಟು 83 ಮಂದಿ ಗಾಯಗೊಂಡಿದ್ದರು.
350x350_IMAGE36753197
ಪ್ರಕರಣ ಸಂಬಂಧ ಎನ್‍ಐಎ ಅಧಿಕಾರಿಗಳು ಹಲವು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪೈಕಿ ಪ್ರಮುಖ ಆರೋಪಿಗಳಾದ ಉಮರ್ ಸಿದ್ದಿಕ್ಕಿ ಹಾಗೂ ಹೈದರ್ ಅಲಿ ಎಂಬುವರನ್ನು ಬಂಧಿಸಿದ್ದರು. ಪಟನಾ ಬಾಂಬ್ ಸ್ಫೋಟಕ್ಕೂ ಚರ್ಚ್‍ಸ್ಟ್ರೀಟ್ ಬಾಂಬ್ ಸ್ಫೋಟಕ್ಕೂ ಸಾಮ್ಯತೆ ಕಂಡು ಬಂದಿದೆ. ಹೀಗಾಗಿ, ಬಿಹಾರ ನ್ಯಾಯಾಲಯದಿಂದ ಬಾಡಿ ವಾರೆಂಟ್ ಪಡೆದು ಇಬ್ಬರನ್ನು ನಗರಕ್ಕೆ ಕರೆತರಲಾಗುತ್ತಿದೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *