ಇತ್ತೀಚೆಗಷ್ಟೇ ಶ್ರೀರಾಮುಲು ಅವರು ಬಿಎಸ್ಸಾರ್ ಕಾಂಗ್ರೆಸ್ ಪಕ್ಷದಿಂದ ಭಾರತೀಯ ಜನತಾ ಪಕ್ಷವನ್ನ ಸೇರಿಕೊಂಡಿದ್ದರು. ಭಾರತೀಯ ಜನತಾ ಪಕ್ಷದ ಮೂಲಕವೇ ರಾಜಕೀಯ ಪ್ರವೇಶ ಮಾಡಿದ್ದ ಮಾಜಿ ಸಚಿವ ಶ್ರೀರಾಮುಲು ಅವರು ರೆಡ್ಡಿ ಸಹೋದರರು ಜೈಲಿಗೆ ಹೋದ ಬಳಿಕ ಬಿಜೆಪಿಯಿಂದ ಸಿಡಿದು ಬಿಎಸ್ಸಾರ್ ಕಾಂಗ್ರೆಸ್ ಹುಟ್ಟುಹಾಕಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶ್ರೀರಾಮುಲು ಅವರನ್ನ ಬಿಜೆಪಿ ತನ್ನ ಪಕ್ಷಕ್ಕೆ ಆಹ್ವಾನಿಸಿತ್ತು. ಕೇಂದ್ರ ನಾಯಕಿ ಸುಷ್ಮಾ ಸ್ವರಾಜ್ ಅವರ ತೀವ್ರ ವಿರೋಧದ ನಡುವೆಯೂ ಬಿಜೆಪಿ ಶ್ರೀರಾಮುಲು ಅವರನ್ನ ಸೇರಿಸಿಕೊಳ್ಳಲು ನಿರ್ಧರಿಸಿತು. ಬಳ್ಳಾರಿ ಕ್ಷೇತ್ರದಲ್ಲಿ ಟಿಕೆಟ್ ಕೂಡ ನೀಡಿತು.
