ಬಂಟ್ವಾಳ:ತಾಲ್ಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ರೂ 75ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುತ್ತು ಪೌಳಿ ಸಮರ್ಪಣೆ ಮತ್ತು ಬ್ರಹ್ಮಕಶೋತ್ಸವವು ಇದೇ 6ರಿಂದ 9ರತನಕ ಸಂಭ್ರಮ ಸಡಗರದಿಂದ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ ಅಂಚನ್ ಈಚೆಗೆ ಬಿ.ಸಿ.ರೋಡ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಕಳೆದ ಏಳು ವರ್ಷಗಳ ಹಿಂದೆ ಕ್ಷೇತ್ರದಲ್ಲಿ ನೂತನ ಗರ್ಭಗುಡಿ ನಿರ್ಮಿಸಿ ದೇವರಿಗೆ ಬ್ರಹ್ಮಕಲಶೋತ್ಸವ ನಡೆದಿದ್ದು, ಇದೀಗ ಸುತ್ತುಪೌಳಿ ನಿರ್ಮಾಣಗೊಂಡು ಗಣಪತಿ ದೇವರ ಪ್ರತಿಷ್ಠೆಯೂ ನಡೆಯಲಿದೆ ಎಂದರು.
6ರಿಂದ ಬ್ರಹ್ಮಕಲಶೋತ್ಸವ, ಸುತ್ತುಪೌಳಿ ಸಮರ್ಪಣೆ

2btl-krenki
ಬ್ರಹ್ಮಶ್ರೀ ನೀಲೇಶ್ವರ ದಾಮೋದರ ತಂತ್ರಿ ಪೌರೋಹಿತ್ಯದಲ್ಲಿ ನಡೆಯುವ ಬ್ರಹ್ಮಕಶ್ರೋತ್ಸವದಲ್ಲಿ ಪ್ರತಿದಿನ ಧಾರ್ಮಿಕ ಸಭೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ಲಕ್ಷ್ಮೀನಾರಾಯಣ ಅಸ್ರಣ್ಣ, ಮಾಣಿಲ ಮೋಹನದಾಸ ಸ್ವಾಮೀಜಿ, ಸುಬ್ರಹ್ಮಣ್ಯ ಸಂಸ್ಥಾನ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅರಣ್ಯ ಸಚಿವ ಬಿ.ರಮಾನಾಥ ರೈ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ.ರವಿ, ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಆರ್ ಎಸ್ ಎಸ್ ಮುಖಂಡ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ ಮತ್ತಿತರ  ಗಣ್ಯರು ಭಾಗವಹಿಸುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ವಕೀಲ ರಾಮಚಂದ್ರ ಶೆಟ್ಟಿ ದಂಡೆ, ಪೂವಪ್ಪ ಮೆಂಡನ್, ಮನೋಜ್ ಕುಮಾರ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *