ಮೂಡುಬಿದರೆ: ಜಯಲಕ್ಷ್ಮೀ ಜಿ. ಅವರು ಮಂಡಿಸಿದ `ಕರ್ನಾಟಕದ ಕರಾವಳಿ ಪ್ರದೇಶದ ಕಲೆ ಮತ್ತು ಶಿಲ್ಪ – ಒಂದು ಸಾಂಸ್ಕ್ರತಿಕ ಅಧ್ಯಯನ ಮಂಗಳೂರು (ದ.ಕ) ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾದಂತೆ ಎಂಬ ಪ್ರೌಢ ಪ್ರಬಂಧಕ್ಕೆ ಮೈಸೂರು ವಿ.ವಿ.ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

ಮೈಸೂರು ವಿ.ವಿ.ಯ ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಪಿ.ಮಹದೇವಯ್ಯ ಅವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದರು.
ಮಣಿಪಾಲ ಅಕಾಡೆಮಿಯ ವಿವಿಧ ಪದವಿ ಕಾಲೇಜುಗಳಲ್ಲಿ ಇಪ್ಪತ್ತಕ್ಕೂ ಹೆಚ್ಚು ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಜಯಲಕ್ಷ್ಮೀ ಜಿ. ಪ್ರಸ್ತುತ ಮೂಡುಬಿದರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
