ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ(ರಿ), ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ , ಬಂಟ್ವಾಳ ಕಂದಾಯ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ , ತಾಲೂಕು ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಗ್ರಾಮ ಪಂಚಾಯತ್‍ಗಳ ಸಂಯುಕ್ತ ಆಶ್ರಯದಲ್ಲಿ ಎಸ್.ವಿ.ಎಸ್.ಫ್ರೌಢಶಾಲೆ ಬಂಟ್ವಾಳದಲ್ಲಿ ನಡೆದ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಗೌ/ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು ಉದ್ಘಾಟಿಸಿದರು.

ನ್ಯಾಯವಾದಿ ಎ.ಮೋಹನ್ ಮೋಟಾರು ವಾಹಮ ಕಾಯಿದೆ ಮತ್ತು ವಿಮಾ ಪರಿಹಾರ ಕಾನೂನಿನ ಬಗ್ಗೆ ಮಾಹಿತಿ ನೀಡಿದರು . ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಅಧ್ಯಕ್ಷತೆ ವಹಿಸಿದ್ದರು . ವೇದಿಕೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ , ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಾನಂದ ಬಾಳಿಗಾ , ಲಯನ್ಸ್ ಸದಸ್ಯ ಸುನೀಲ್ ಅಪೂರ್ವ ,ಮುಖ್ಯೋಪಾಧ್ಯಾಯಿನಿ ವಿಜಯಾ ಭಟ್ , ಪ್ರಾಧ್ಯಾಪಕರಾದ ರತನ್ , ಜಯಶ್ರೀ , ಶಾಂತಾಬಾಯಿ ಉಪಸ್ಥಿತರಿದ್ದರು .
