ಬಂಟ್ವಾಳ : : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ(ರಿ), ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ , ಬಂಟ್ವಾಳ ಕಂದಾಯ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ , ತಾಲೂಕು ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿವಿಧ ಗ್ರಾಮ ಪಂಚಾಯತ್ಗಳ ಸಂಯುಕ್ತ ಆಶ್ರಯದಲ್ಲಿ ನರಿಕೊಂಬು ಗ್ರಾ.ಪಂ.ನಲ್ಲಿ ನಡೆದ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಗೌ/ಹಿರಿಯ ಸಿವಿಲ್ ನ್ಯಾಯಾಧೀ ಶರಾದ ಚಂದ್ರಶೇಖರ ಯು ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಕೇಶವಿ ಗಿರೀಶ್ ಮಹಿಳಾ ಕಾನೂನು ಬಗ್ಗೆ ಮಾಹಿತಿ ನೀಡಿದರು . ಗ್ರಾ.ಪಂ.ಅಧ್ಯಕ್ಷೆ ಸುಮತಿ ಸದಾನಂದ ಅಧ್ಯಕ್ಷತೆ ವಹಿಸಿದ್ದರು . ವೇದಿಕೆಯಲ್ಲಿ ಗೌ/ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶರಾದ ಆರ್.ಮಹೇಶ್ , ಸಹಾಯಕ ಸರಕಾರಿ ಅಭಿಯೋಜಕಿ ಅರ್ಚನಾ ಪ್ರಸಾದ್ , ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಮಾಜಿ ಅಧ್ಯಕ್ಷ ಸುರೇಶ್ ಪೂಜಾರಿ, ಉಮೇಶ್ ಕುಮಾರ್ ವೈ , ಮಾಜಿ ತಾ.ಪಂ.ಉಪಾಧ್ಯಕ್ಷ ಆನಂದ ಶಂಭೂರು , ಲಯನ್ ಮಾಜಿ ಅಧ್ಯಕ್ಷ ದಾಮೋದರ್ ಬಿ.ಎಂ. , ಪಂ.ಅಭಿವೃದ್ಧಿ ಅಧಿಕಾರಿ ಶಮಂತ ಕುಮಾರಿ , ಶಿಶು ಅಭಿವೃದ್ಧಿ ಅಧಿಕಾರಿ ಸುಧಾ ಜೋಷಿ , ಮೇಲ್ವಿಚಾರಕಿ ಪುಷ್ಪಲತಾ ಮತ್ತಿತರರು ಉಪಸ್ಥಿತರಿದ್ದರು.
