ಕೈಕಂಬ: ಶ್ರೀಕೃಷ್ಣ ಫ್ರೆಂಡ್ಸ್ ಕ್ಲಬ್ ಕೆಳಗಿನ ಬೈಲ್ ಮಳಲಿ ಇದರ 11ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಮಾರ್ಚ್ 8ರ ಭಾನುವಾರ ಸಂಘದ ಆವರಣದಲ್ಲಿ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ನಡೆದು, ಬಳಿಕ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

