ಬಂಟ್ವಾಳ :  ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಕ್ಕೆಪದವು, ಮಾಣಿ ಹಾಗೂ ವಾಮದಪದವು ಪಶುವೈದ್ಯಕೀಯ ಚಿಕಿತ್ಸಾಲಯಗಳಿಗೆ ನೂತನ ಕಟ್ಟಡ ನಿರ್ಮಾಣವಾಗಲಿದೆ ಎಂದು ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಆರ್.ಐ.ಡಿ.ಎಫ್.ಘಿಘಿರಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ರೂ27.90ಲಕ್ಷ ವೆಚ್ಚದಲ್ಲಿ ಒಟ್ಟು ಏಳು ಕಟ್ಟಡಗಳು ನಿರ್ಮಾಣಗೊಳ್ಳಲಿದ್ದು, ಬಂಟ್ವಾಳದಲ್ಲಿ ಮೂರು ಕಟ್ಟಡಗಳು ನಿರ್ಮಾಣಗೊಳ್ಳಲಿವೆ. ಇದಕ್ಕಾಗಿ ರೂ.63.70 ಲಕ್ಷ ಮೊತ್ತಕ್ಕೆ ಸರಕಾರವು ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮವು ಕಟ್ಟಡ ನಿರ್ಮಾಣ ಕಾರ್ಯವನ್ನು ನಿರ್ವಹಿಸಲಿದೆ. ಅಲ್ಲದೆ ಮೂರ್ಜೆ ಪಶು ಚಿಕಿತ್ಸಾಲಯದ ಕಟ್ಟಡ ವಿಸ್ತರಣೆಗೆ ಇಎಸ್‍ವಿಡಿ ಯೋಜನೆಯಲ್ಲಿ ರೂ.10.00ಲಕ್ಷ ಅನುದಾನ ಮಂಜೂರಾಗಿದೆ ಎಂದು ಅವರು ತಿಳಿಸಿದ್ದಾರೆ.

 

By suddi9

Leave a Reply

Your email address will not be published. Required fields are marked *