ಮೂಡುಬಿದರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟದ ಪದಗ್ರಹಣ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜರಗಿತು.
ಇರುವೈಲಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಪುರೋಹಿತ ಐ.ರಾಘವೇಂದ್ರ ಆಸ್ರಣ್ಣ ಪೂಜಾವಿಧಿಗಳನ್ನು ನೆರವೇರಿಸಿದರು. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಐ.ವಿಜಯಕುಮಾರ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕತ ಶಿಕ್ಷಕ ರಮೇಶ್ ನಾಯಕ್, ರಾಯಿ ಕರ್ಪೆ ಅವರನ್ನು ಸನ್ಮಾನಿಸಲಾಯಿತು.

ಗೋಪಾಲ್ ಜಿ, ಜೊಸ್ಸಿ ಮಿನೇಜಸ್, ಸುಶಾಂತ್ ಕರ್ಕೇರ, ಭುಜಂಗ ಆರ್. ಶೆಟ್ಟಿ, ದೊಡ್ಡಗುತ್ತು, ಜಯರಾಮ ಶೆಟ್ಟಿ ವಾಸುದೇವ ಸಾಮಂತ್, ಕುಸುಮಾ ನೂತನ ಅಧ್ಯಕ್ಷರಾದ ಕುಶಲ ನಾರಾಯಣ ಪೂಜಾರಿ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ಸ್ವಾಗತಿಸಿದರು.
ಕುಶಲ ಶೆಟ್ಟಿ ವರದಿ ವಾಚಿಸಿದರು. ಮೇಲ್ವಿಚಾರಕಿ ಶಶಿಕಲಾ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಚಂದ್ರಹಾಸ ಭಟ್ ವಂದಿಸಿದರು.
