ಬಂಟ್ವಾಳ:ತಾಲ್ಲೂಕಿನ ನರಿಕೊಂಬು ಗ್ರಾಮದ ಮಾಣಿಮಜಲು ಎಂಬಲ್ಲಿ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವಕನೊಬ್ಬ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಮೋಹನಾದಾಸ ಗೌಡರ ಪುತ್ರ ಸುದೀಪ್(29) ಎಂದು ಗುರುತಿಸಲಾಗಿದೆ.
ವಿಪರೀತ ಕುಡಿತದ ಚಟ ಹೊಂದಿದ್ದ ಇವರು ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದರು ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *