ಬೆಂಗಳೂರು: ರಾಜ್ಯದಲ್ಲಿ ಮೀನುಗಾರಿಕೆ ಉತ್ತೇಜಿಸಲು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ.

fish
‘ಮೀನುಗಾರಿಕೆಗೆ ಶೂನ್ಯ ಬಡ್ಡಿ ದರದಲ್ಲಿ ಗರಿಷ್ಠ  1 ಲಕ್ಷದವರೆಗೆ ಸಾಲ ನೀಡಲಾಗುವುದು. ಯಾಂತ್ರೀಕೃತ ದೋಣಿಗಳಿಗೆ ನೇರವಾಗಿ ಮಾರಾಟ ಕರ ಮರುಪಾವತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ರಾಜ್ಯದ 5 ಜಲಾಶಯಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲಾಗುವುದು. 5 ಮೊಬೈಲ್‌ ಮೀನು ಉತ್ಪನ್ನ ಮಾರಾಟ ಕೇಂದ್ರಗಳನ್ನು ಆರಂಭಿಸಲಾಗುವುದು. ಮೀನುಗಾರಿಕೆ ಉತ್ತೇಜನಕ್ಕೆ ರಾಜ್ಯದ ವಿವಿಧೆಡೆ ಬೃಹತ್‌ ಮೀನುಗಾರಿಕೆ ಮಾಹಿತಿ ಮೇಳ ಆಯೋಜಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ.

By suddi9

Leave a Reply

Your email address will not be published. Required fields are marked *