ಬಂಟ್ವಾಳ: ಮಕ್ಕಳು ಆತ್ಮವಿಶ್ವಾಸ ಜೊತೆ ಮನೋಸ್ಥೆರ್ಯವನ್ನು ಬೆಳೆಸಿಕೊಂಡಾಗ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಹೇಳಿದರು.
ಅವರು ಬಾಲವಿಕಾಸ ಅಕಾಡೆಮಿ ಧಾರಾವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಇವರ ಆಶ್ರಯದಲ್ಲಿ ಕೊಡಂಗೆ ಪ್ರೌಡ ಶಾಲೆಯಲ್ಲಿ ನಡೆದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ದತಾ ತರಭೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಜೊತೆಗೆ ಆರೋಗ್ಯಕರ ವಾತಾವರಣ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ ಅದಕ್ಕೆ ಹೆತ್ತವರ ಸಹಕಾರ ಕೂಡಾ ಅಗತ್ಯ ಎಂದರು. ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಪ್ರೌಡ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್ ಲೋಬೋ, ಸಂಪನ್ಮೂಲ ವ್ಯಕ್ತಿ ಸಂತೋಷ್ ಕೊಡಂಗೆ ಪ್ರೌಡ ಶಾಲಾ ಮುಖ್ಯೋಪಾದ್ಯಾಯ ಭಾಸ್ಕರ್ ಉಪಸ್ಥಿತರಿದ್ದರು. ಶಿಕ್ಷಣ ಸಂಯೋಜಕಿ ಸುಜಾತ ಸ್ವಾಗತಿಸಿ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಮೇಲ್ವಿಚಾರಕಿ ವಂದಿಸಿದರು. ಮೇಲ್ವಿಚಾರಕಿ ಸರೋಜ ಭಟ್ ಕಾರ್ಯಕ್ರಮ ನಿರೂಪಿಸಿದರು.
