ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಬಳಿ ಸಂಚರಿಸುತ್ತಿದ್ದ ಬೈಕಿಗೆ ಟ್ಯಾಂಕರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ಯುವಕನೊಂದಿಗೆ ಪ್ರಯಾಣಿಸುತ್ತಿದ್ದ ಯುವತಿ ಟ್ಯಾಂಕರ್ ಚಕ್ರದಡಿ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಪೆರ್ಲ ಬಜಕೂಡ್ಲು ನಿವಾಸಿ ದೀಪ್ತಿ ರೈ(24) ಎಂದು ಗುರುತಿಸಲಾಗಿದೆ.

bntwl
ಈಕೆ ಯುವಕ ವಿನೋದ್ ರೈ ಎಂಬವರ ಬೈಕಿನಲ್ಲಿ ಮಂಗಳೂರಿನ ಕಡೆಗೆ ಶುಕ್ರವಾರ ಮಧ್ಯಾಹ್ನ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟ್ಯಾಂಕರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಕೆ ರಸ್ತೆ ಬಿದ್ದ ವೇಳೆ ಆಕೆಯ ಸೊಂಟದ ಮೇಲೆ ಟ್ಯಾಂಕರ್ ಚಕ್ರ ಹಾದು ಹೋಗಿದೆ. ತೀವ್ರ ರಕ್ತಸ್ರಾವದಿಂದ ಒದ್ದಾಟ ನಡೆಸುತ್ತಿದ್ದ ಆಕೆಯನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೇ ವಿದೇಶದಿಂದ ಊರಿಗೆ ಬಂದಿದ್ದ ವಿನೋದ್ ರೈ ಜೊತೆಗೆ ದೀಪ್ತಿ ರೈ ವಿವಾಹ ನಿಶ್ಚಿತಾರ್ಥ ನಡೆಸಲಾಗಿದ್ದು, ಮುಂದಿನ ಎರಡು ತಿಂಗಳ ಬಳಿಕ ವಿವಾಹ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.

By Suddi9

Leave a Reply

Your email address will not be published. Required fields are marked *