ಬಂಟ್ವಾಳ; ಮನೆಯೊಂದಕ್ಕೆ ನುಗ್ಗಿದ ವ್ಯಕ್ತಿಯೋರ್ವ ಬಾಲಕಿಗೆ ಲೈಂಗಿಕ ಹಿಂಸೆ ನೀಡಿದ ಘಟನೆ ಸಿದ್ದಕಟ್ಟೆ ಸಮೀಪ ನಡೆದಿದ್ದು, ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ತೆಗದುಕೊಂಡಿದ್ದಾರೆ. ಇಲ್ಲಿನ ನಿವಾಸಿ ವಿಷ್ಣು ಎಂಬಾತ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಬಾಲಕಿ ಮನೆಯಲ್ಲಿ ಏಕಾಂಗಿಯಾಗಿದ್ದ ಸಂದರ್ಭ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಬಂದು, ಕೈ ಹಿಡಿದು ಎಳೆದು ಕಿರುಕುಳ ನೀಡಿದ್ದಾನೆ.ತಕ್ಷಣ ಬೊಬ್ಬೆ ಹಾಕಿದ ಬಾಲಕಿ ಮನೆಯಿಂದ ಹೊರಗೆ ಓಡಿ ಹೋಗಿದ್ದು, ಸ್ಥಳೀಯ ನಿವಾಸಿಗಳು ಬಾಲಕಿ ನೆರವಿಗೆ ಬಂದು ಆರೋಪಿಗೆ ವಿಷ್ಣು ವಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಬಾಲಕಿ ನೀಡಿದ ದೂರಿನಂತೆ, ಆರೋಪಿ ವಿರುದ್ದ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
