ವಿದ್ಯಾರ್ಥಿಗಳಲ್ಲಿ ತಾಳ್ಮೆ ಅತೀ ಅಗತ್ಯ. ನಾವು ಮಾಡುವ ಯಾವುದೇ ಕೆಲಸ ಕಾರ್ಯಗಳಲ್ಲಿ ನಮಗೆ ತಾಳ್ಮೆ ಶ್ರದ್ಧೆ ಇದ್ದರೆ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ.
ಇತ್ತೀಚೆಗೆ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನ ಆಂಗ್ಲ ಭಾಷಾ ಸಂಘದ ವತಿಯಿಂದ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಕ್ರಾಸ್ ಲ್ಯಾಂಡ್ ಕಾಲೇಜು, ಬ್ರಹ್ಮಾವರ ಇದರ ಆಂಗ್ಲ ವಿಭಾಗದ ಮುಖ್ಯಸ್ಥರಾದ ಜಾನ್ಸನ್ ಜೀಕಬ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾನಾಡುತ್ತಾ ಹೀಗೆ ಹೇಳಿದರು.
ಮುಂದುವರಿಸುತ್ತಾ, ಆಂಗ್ಲ ಭಾಷೆ ಮಾತನಾಡುವವರ ಸಂಖ್ಯೆ ಜಗತ್ತಿನಲ್ಲಿಯೇ ಅಮೇರಿಕಾ ಮೊದಲ ಸ್ಥಾನದಲ್ಲಿದ್ದರೆ, ನಮ್ಮ ದೇಶ ದ್ವಿತೀಯ ಸ್ಥಾನದಲ್ಲಿದೆ ಎಂದರು. ಕಥೆಯ ಮೂಲಕ ತಮ್ಮ ಮಾತನ್ನು ಪ್ರಾರಂಭಿಸಿ, ಗ್ರಾಮೀಣ ಪ್ರದೇಶಗಳಿಂದ ಬಂದ ವಿದ್ಯಾರ್ಥಿಗಳು ಪಟ್ಟಣ ಪ್ರದೇಶಗಳ ವಿದ್ಯಾರ್ಥಿಗಳ ಹಾಗೆ ಆಂಗ್ಲ ಭಾಷೆ ಚೆನ್ನಾಗಿ ಮಾತನಾಡಬಲ್ಲರು. ತಾವು ಕೂಡ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ, ಮಾತೃ ಭಾಷೆಯಲ್ಲಿ ವಿದ್ಯಾಭ್ಯಾಸ ಮುಗಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.
24-9
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್ ರವರು ವಿದ್ಯಾರ್ಥಿಗಳು ಇಂಗ್ಲೀಷ್ ಮಾತನಾಡುವ ಕೌಶಲ್ಯ ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಅತಿಥಿಯಾಗಿ ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ| ಟಿ.ಕೆ.ರವೀಂದ್ರನ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ‘ಕಮ್ಯೂನಿಕೇಟಿವ್ ಇಂಗ್ಲೀಷ್ ಕೋರ್ಸ್ನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಮುಖ್ಯ ಅತಿಥಿಗಳು ವಿತರಿಸಿದರು. ಗುರುಪ್ರಸಾದ್ ಎನ್.ಶೆಣೈ ದ್ವಿತೀಯ ಬಿ.ಕಾಂ. ಸ್ವಾಗತಿಸಿ, ಕು| ಗಾಯನ ಪ್ರಭು ವಂದಿಸಿದರು. ಕು| ಕಾವ್ಯ ಕೆ. ನಾಯಕ್ ದ್ವಿತೀಯ ಬಿ.ಎಸ್ಸಿ. ಕಾರ್ಯಕ್ರಮ ನಿರ್ವಹಿಸಿದರು.

By Suddi9

Leave a Reply

Your email address will not be published. Required fields are marked *