ಬಂಟ್ವಾಳ: ತಾಲ್ಲೂಕಿನ 15 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ನಡೆದ ಎಸ್ಎಸ್ಎಲ್ಸಿ ವಿಭಾಗದ ವಿಜ್ಞಾನ ವಾರ್ಷಿಕ ಪರೀಕ್ಷೆಗೆ ಒಟ್ಟು 154 ಮಂದಿ ಗೈರು ಹಾಜರಾಗಿದ್ದಾರೆ.
ವಿಜ್ಞಾನ ಪರೀಕ್ಷೆಗೆ ಹಾಜರಾಗಬೇಕಿದ್ದ ಒಟ್ಟು 6,305 ಮಂದಿ ವಿದ್ಯಾರ್ಥಿಗಳ ಪೈಕಿ ಒಟ್ಟು 6,151 ಮಂದಿ ಮಾತ್ರ ಭಾಗವಹಿಸಿದ್ದು, ಕಳೆದ ಸೋಮವಾರ ಆರಂಭಗೊಂಡ ಕನ್ನಡ ಮತ್ತು ಸಂಸ್ಕೃತ ಪರೀಕ್ಷೆಗೆ ಒಟ್ಟು 148ಮಂದಿ ಗೈರು ಹಾಜರಾಗಿದ್ದರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ.

