ಮೂಡುಬಿದಿರೆ: ಬೆಳುವಾಯಿ ಸಮೀಪದ ಕಾಂತಾವರ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಖಾಸಗಿ ಬಸ್ ಹಾಗೂ ಓಮ್ನಿ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
IMG-20150408-WA0042

IMG-20150408-WA0043

IMG-20150408-WA0045

IMG-20150408-WA0046 (1)

IMG-20150408-WA0046

IMG-20150408-WA0047

IMG-20150408-WA0048

IMG-20150408-WA0049

ಅಲಂಗಾರು ಮಂಜುನಾಥ ಸೈಕಲ್ ಶಾಪ್ನ ಮಾಲಕ ವೀರಪ್ಪ ಎಂಬವರು ಅಪಘಾತದಲ್ಲಿ ಮೃತಪಟ್ಟವರು. ಬುಧವಾರ ಮಧ್ಯಾಹ್ನ ಸಾಣೂರಿನಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಕುಟುಂಬದ ಸದಸ್ಯರೊಂದಿಗೆ ಓಮ್ನಿಯಲ್ಲಿ ಅಲಂಗಾರಿನತ್ತ ಬರುತ್ತಿದ್ದಾಗ, ಮೂಡುಬಿದಿರೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಕಾಂತಾವರ ಕ್ರಾಸ್ ಬಳಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಓಮ್ನಿ ಕಾರು ಸಂಪೂರ್ಣ ಜಖಂಗೊಂಡಿದ್ದು, ವೀರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಧಾಮರ್ಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ತೆರಳಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *