• ಬಂಟ್ವಾಳ; ಸರ್ಕಾರದಿಂದ ಹೊಸದಾಗಿ ಮಂಜೂರಾಗಿರು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಉದ್ಘಾಟನಾ ಸಮಾರಂಭ ಎ.10 ರಂದು ಬೆಳಿಗ್ಗೆ 9.30 ಕ್ಕೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಂಚಾರಿ ಪೊಲೀಸ್ ಠಾಣೆಯನ್ನು ಉದ್ಘಾಟಿಸುವರು. ಆರೋಗ್ಯ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವಸಂತ ಬಂಗೇರ, ಶಕುಂತಳಾ ಶೆಟ್ಟಿ, ಎಸ್.ಅಂಗಾರ, ಕ್ಯಾ.ಗಣೇಶ್ ಕಾರ್ಣಿಕ್, ಐವನ್ ಡಿಸೋಜ, ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ತಾ.ಪಂ. ಅಧ್ಯಕ್ಷ ಯಶವಂತ ದೇರಾಜೆ, ಪುರಸಭಾ ಅಧ್ಯಕ್ಷೆ ವಸಂತಿಚಂದಪ್ಪ, ಬುಡಾ ಅಧ್ಯಕ್ಷ ಪಿಯುಸ್ ರೊಡ್ರಿಗಸ್, ಪಶ್ಚಿಮ ವಲಯ ಐಜಿಪಿ ಸಮ್ರಿತ್ ಪಾಲ್, ಮಂಗಳೂರು ನಗರ ಪೊಲೀಸ್ ಆಯುಕ್ತ ಎಸ್.ಮುರುಗನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

By suddi9

Leave a Reply

Your email address will not be published. Required fields are marked *