ಬಂಟ್ವಾಳ : ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೇತ್ರಾವತಿ ರಸ್ತೆ 4ನೇ ವಾರ್ಡಿಗೆ 2013-14 ರ ಆಸ್ಕರ್ ಫೆರ್ನಾಂಡಿಸ್ ರವರ ಪ್ರದೇಶಾಭಿವೃದ್ಧಿ ಯೋಜನೆಯಡಿ 10 ಲಕ್ಷ ಅನುದಾನದ ಬೊಳ್ಳಾರಿ ರಸ್ತೆ ಕಾಂಕ್ರಿಟೀಕರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಗುದ್ದಲಿಪೂಜೆ ನೆರವೇರಿಸಿದರು.

ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಅಮೀರ್ ಅಹ್ಮದ್ ತುಂಬೆ , ತುಂಬೆ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಮಜಿ , ಪಂ.ಸದಸ್ಯರಾದ ಗಣೇಶ್ ಸಾಲಿಯಾನ್ , ಗಿರಿಜಾ ದಯಾನಂದ , ಜೆಸಿಂತಾ , ಜಗದೀಶ್ , ಪ್ರವೀಣ್ ಕೊಟ್ಟಿಂಜ ಉಪಸ್ಥಿತರಿದ್ದರು .
