ಬಂಟ್ವಾಳ:ತಾಲ್ಲೂಕಿನ ಕಾವಳಪಡೂರು ಗ್ರಾಮದ ಕಾಡಬೆಟ್ಟು ರಾಷ್ಟ್ರೀಯ ಹೆದ್ದಾರಿ ಬಳಿ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಗೋಡೆ ಕಟ್ಟಿ ಸಿಮೆಂಟು ಶೀಟು ಅಳವಡಿಸಿ ಹೋಟೆಲ್ ನಡೆಸುತ್ತಿರುವ ವ್ಯಕ್ತಿಯೊಬ್ಬ ಅಕ್ರಮ ನಳ್ಳಿ ನೀರು ಪಡೆಯಲು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಜೀವ ಬೆದರಿಕೆ ಒಡ್ಡಿದ ಘಟನೆ ಶುಕ್ರವಾರೆ ನಡೆದಿದೆ.
ಆರೋಪಿಯನ್ನು ಇಲ್ಲಿನ ನಿವಾಸಿ ಹಸನಬ್ಬ ಮತ್ತು ಆತನ ಪುತ್ರ ಇಕ್ಬಾಲ್ ಎಂದು ಗುರುತಿಸಲಾಗಿದ್ದು, ಇವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
