ಮಂಗಳೂರು : ಸರಕಾರವು ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳುತ್ತಿದ್ದು, ಜನರು ಅದರ ಸದುಪಯೋಗವನ್ನು ಪಡೆಯಬೇಕೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಆರ್. ಲೋಬೊ ರವರು ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಗಾರದ ಸಂವಾದವನ್ನು ಉದ್ಫಾಟಿಸಿ ಮಾತನಾಡಿದರು.
ಈ ಕಾರ್ಯಗಾರವು ರೋಶನಿ ನಿಲಯ ಕಾಲೇಜು ಸಭಾಂಗಣದಲ್ಲಿ ಇಂದು ನಡೆಯಿತು.
ಜನರ ಕಲ್ಯಾಣಕ್ಕೆ ವಿವಿಧ ಯೋಜನೆಗಳಿವೆ. ಸರಕಾರದ ವಿಚಾರಗಳು ಪ್ರತಿಯೊಬ್ಬರಿಗೂ ತಲುಪಬೇಕು. ಕೆಲವರಿಗೆ ಈ ಬಗ್ಗೆ ಸರಿಯಾದ ಮಾಹಿತಿ ಇರುವುದಿಲ್ಲ. ಕಾರ್ಮಿಕರಿಗೆ ದೊರಕುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಜನರಿಗೆ ತಲುಪಿಸಲು ಸ್ವಯಂ ಸೇವಕರು ಮತ್ತು ಸಕರ್ಾರೇತರ ಸಂಘ ಸಂಸ್ಥೆಗಳ ನೆರವಿನ ಅಗತ್ಯವಿದೆ. ಮನಪಾ ಮಹಾಪೌರರಾದ ಶ್ರೀಮತಿ ಜೆಸಿಂತಾ ಆಲ್ಪ್ರೇಡ್, ವಕೀಲರ ಸಂಘದ ಅಧ್ಯಕ್ಷ ಎಸ್.ಪಿ. ಚೆಂಗಪ್ಪ ರವರು ಉಪಸ್ಥಿತರಿದ್ದರು.
