ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ನಡೆದ ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದೆ ಶೃತಿ ಇವರನ್ನು ಬಂಟ್ವಾಳ ಕೆಡಿಪಿ ಸದಸ್ಯ ಉಮೇಶ ಬೋಳಂತೂರು ಸನ್ಮಾನಿಸಿದರು. ಗ್ರಾ.ಪಂ.ಅಧ್ಯಕ್ಷೆ ಸುಮತಿ ಸದಾನಂದ, ಮುಖ್ಯಶಿಕ್ಷಕಿ ಚಂದ್ರಾವತಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ವಿನ್ಸೆಂಟ್ ಮಿನೇಜಸ್ ಮತ್ತಿತರರು ಇದ್ದಾರೆ.

