ಮೂಡುಬಿದಿರೆ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ನಿರಂತರ ಅತ್ಯಾಚಾರ ನಡೆಸಿದ ಹಾಗೂ ಬಳಿಕ ಮದುವೆಗೆ ನಿರಾಕರಿಸಿದ ಆರೋಪದಲ್ಲಿ ಓರ್ವನನ್ನು ಬಂಧಿಸಿರುವ ಮೂಡುಬಿದರೆ ಪೋಲಿಸರು ಆತನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ಮೂಡುಬಿದಿರೆ ಮಾರ್ಪಾಡಿ ಗ್ರಾಮದ ಅಲಂಗಾರು ನಿವಾಸಿ ಗೋಪಾಲ ಎಂಬವರ ಪುತ್ರ ವೃತ್ತಿಯಲ್ಲಿ ಮೇಸ್ತ್ರಿಯಾಗಿರುವ ಅನಿಲ್ (25) ಆರೋಪಿ ಬಂಟ್ವಾಳ ತಾಲೂಕಿನ ರಾಯಿ ಎಂಬಲ್ಲಿಯ 25ರ ಹರೆಯದ ಸಂಬಂಧಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಕಳೆದ ಜ.1ರಿಂದ ಮಾ.15ರ ವರೆಗೆ ತನ್ನ ಮನೆಯಲ್ಲೇ ಕುಳ್ಳಿರಿಸಿ ನಿರಂತರ ಅತ್ಯಾಚಾರ ನಡೆಸಿದ್ದ. ಬಳಿಕ ಮದುವೆಯಾಗಲು ನಿರಾಕರಿಸಿ ಮನೆಯಿಂದಲೂ ಹೊರ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆಕೆ ಪೋಲಿಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಆರೋಪಿಯನ್ನು ಬುಧವಾರ ಮೂಡುಬಿದರೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರ
