ಬಂಟ್ವಾಳ : ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವುದರ ಮೂಲಕ ಬರಲಿರುವ ಪಂಚಾಯತ್ ಚುನಾವಣೆಗೆ ಸಿದ್ಧತೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕರ್ನಾಟಕ ಸರಕಾರದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಕರೆ ನೀಡಿದರು. ಕರ್ನಾಟಕ ಸರಕಾರದ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯನವರು ಈಗಾಗಲೇ ಹಲವಾರು ಜನಪರ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದ್ದು ಜನಮೆಚ್ಚುಗೆಯನ್ನು ಗಳಿಸಿದೆ ಈ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯವಾಗಬೇಕಾಗಿದೆ. ಅಲ್ಲದೆ ಕೇಂದ್ರ ಸರಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸ್ವಾಧೀನ ಕಾಯಿದೆಯಿಂದ ರೈತರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ವೇದಿಕೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಪಕ್ಷದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಚ್.ಖಾದರ್ ಉಪಸ್ಥಿತರಿದ್ದರು. ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ,ಜಿ.ಪಂ.ಸದಸ್ಯರಾದ ಮಮತಾ ಗಟ್ಟಿ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ತಾ.ಪಂ.ಸದಸ್ಯರಾದ ಪದ್ಮಶೇಖರ್ ಜೈನ್, ಮಾಧವ ಮಾವೆ, ದೇವಿಕಾ ರೈ, ಲವೀನ ಡಿಸೋಜ ಪುಷ್ಪಾವತಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಶೇಖರ ನಾಯಕ್, ಜಿನರಾಜ ಅರಿಗ, ಪದ್ಮನಾಭ ರೈ, ಬಿ.ಕೆ.ಇದಿನಬ್ಬ ಸಾಲೆ ಮಹಮ್ಮದ್, ಪಕ್ಷದ ಪದಾಧಿಕಾರಿಗಳಾದ ಪ್ರಶಾಂತ್ ಕುಲಾಲ್, ಮಹಮ್ಮದ್ ನಂದರಬೆಟ್ಟು ಮಧುಸೂದನ್ ಶೆಣೈ, ಮಹಮ್ಮದ್ ನಂದಾವರ, ಜನಾರ್ಧನ್ ಚೆಂಡ್ತಿಮಾರ್, ಲುಕ್ಮಾನ್, ವಿಶ್ವನಾಥ ಗೌಡ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರು, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸುಭಾಶ್ಚಂದ್ರ ಶೆಟ್ಟಿ ಧನ್ಯವಾದವಿತ್ತರು.

By Suddi9

Leave a Reply

Your email address will not be published. Required fields are marked *