ಮೂಡುಬಿದಿರೆ: ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಚಕ್ರವ್ಯೂಹ 2015 ರಾಷ್ಟೀಯ ಮಟ್ಟದ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಉಜಿರೆ ಎಸ್.ಡಿ.ಎಮ್ ಕಾಲೇಜು ಸಮಗ್ರ ಪ್ರಶಸ್ತಿ ಹಾಗೂ ತೋಡಾರಿನ ಡಾ. ಎಮ್.ವಿ.ಶೆಟ್ಟಿ ಕಾಲೇಜು ರನ್ನರ್ ಅಪ್ ಪ್ರಶಸ್ತಿ ಪಡೆದಿದೆ.
ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ನಿರಂಜನ್ ಎನ್ ಚಿಪಣೂಕರ್ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸ್ಪರ್ಧೆಗಳಿಗೆ ಬಹುಮಾನ ವಿತರಿಸಿದರು. ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್ ಮತ್ತು ಕಾರ್ಯಕ್ರಮದ ಸಂಯೋಜಕ,ಕಂಪ್ಯೂಟರ್ ವಿಭಾಗ ಮುಖ್ಯಸ್ಥ ಮಂಜುನಾಥ ಕೋಠಾರಿ ಉಪಸ್ಥಿತರಿದ್ದರು.
ಆಳ್ವಾಸ್ ಚಕ್ರವ್ಯೂಹದಲ್ಲಿ ರನ್ನರ್ ಅಪ್ ಪಡೆದ ಮೂಡುಬಿದರೆ ಡಾ.ಎಂ.ವಿ ಶೆಟ್ಟಿ ಕಾಲೇಜಿನ ತಂಡ.

ಆಳ್ವಾಸ್ ಚಕ್ರವ್ಯೂಹದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಉಜಿರೆ ಎಸ್ಡಿಎಂ

