ಬಂಟ್ವಾಳ: ಅಮ್ಟಾಡಿ ಗ್ರಾಮದ ಮುಂಡೆಗುರಿ ಪರಿಶಿಷ್ಟ ಪಂಗಡ ಕಾಲನಿಗೆ ಸಂಪರ್ಕ ರಸ್ತೆಯನ್ನು ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.

ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯ ಎಪ್ರೇಮ್ ಸಿಕ್ವೇರಾ, ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬಬಿತಾ ಕೋಟ್ಯಾನ್, ಅಮ್ಟಾಡಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ನರಸಿಂಹ ಹೊಳ್ಳ, ಬಂಟ್ವಾಳ ಅಕ್ರಮ-ಸಕ್ರಮ ಸಮಿತಿ ಸದಸ್ಯೆ ಫ್ಲೋಸಿ ಡಿ’ಸೋಜ, ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಎರ್ಮುಡೆ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನರೇಂದ್ರಬಾಬು, ಕಿರಿಯ ಇಂಜಿನಿಯರ್ ಜಗದೀಶ್, ಪ್ರಮುಖರಾದ ಪಂಚು ಬಂಟ್ವಾಳ್, ಜೋಕಿಂ ಡಿ’ಸೋಜ, ತೋಮಸ್ ಸಲ್ಡಾನ, ಆಲ್ವಿನ್ ಡಿ’ಸೋಜ ಮೊದಲಾದವರು ಉಪಸ್ಥಿತರಿದ್ದರು.
