ಬಂಟ್ವಾಳ:ತಾಲ್ಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕ ಬದ್ರಿಯಾ ಜುಮಾ ಮಸೀದಿ ಕಾರ್ಯದರ್ಶಿ ಅಬ್ದುಲ್ ಮಜೀದ್ ಎಂಬಾತನು ಮಸೀದಿ ಲೆಟರ್ ಹೆಡ್ ದುರ್ಬಳಕೆ ಮಾಡಿ ಆಡಳಿತ ಕಮಿಟಿ ಸದಸ್ಯರ ವಿರುದ್ದವೇ ಸುಳ್ಳು ದೂರು ನೀಡಿದ್ದಾನೆ ಎಂದು ಆರೋಪಿಸಿ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿದೆ.
ಮಸೀದಿ ಆಡಳಿತ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಗಮನಕ್ಕೆ ಬಾರದೆ ಅಲ್ಲಿನ ಲೆಟರ್ಹೆಡ್ ಬಳಸಿಕೊಂಡು ತಮ್ಮ ವಿರುದ್ದ ಮಸೀದಿ ಮುದರ್ರಿಸ್ ಅಶ್ರಫ್ ಸಖಾಫಿ ಮತ್ತು ಮುಅಝಿನ್ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
