ಬಂಟ್ವಾಳ: ತಾಲ್ಲೂಕಿನ ಮಂಚಿ ಸಮೀಪದ ಕಲ್ಕಾರು ದೈವಸ್ಥಾನದಲ್ಲಿ ಅಣ್ಣಪ್ಪ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ನೇಮೋತ್ಸವ ನಡೆಯಲಿದೆ.
ಅಂದು ಮಧ್ಯಾಹ್ನ ಧಾರ್ಮಿಕ ಸಭೆಯಲ್ಲಿ ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಅವರಿಂದ ಆಶೀರ್ವಚನ ಹಾಗೂ ರಾಜ್ಯಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಅಳಿಕೆ ಸಂಜೀವ ಶೆಟ್ಟಿ ಧಾರ್ಮಿಕ ಉಪನ್ಯಾಸ ನೀಡುವರು. ಇದೇ ವೇಳೆ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ, ಸಾರ್ವಜನಿಕ ಅನ್ನಸಂತರ್ಪಣೆ, ಜಿಲ್ಲೆಯ ಪ್ರಸಿದ್ಧ ಅತಿಥಿ ಕಲಾವಿದರಿಂದ ‘ಭರತಾಗಮನ’ ಯಕ್ಷಗಾನ ತಾಳಮದ್ದಳೆ ಕೂಟ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.