ಬಂಟ್ವಾಳ : ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ಮಾ.18 ಶನಿವಾರ ವಿಶ್ವ ಪರಂಪರೆಗಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಪ್ರಾಂಶುಪಾಲೆ ಶ್ರೀಮತಿ ರಮಾಶಂಕರ್ ಮಾತನಾಡಿ, “ನಮ್ಮ ಪೂರ್ವಜರು ನಮಗೆ ಬಳುವಳಿಯಾಗಿ ಕೊಟ್ಟುಹೋದ ಪರಂಪರೆಯನ್ನು ಉಳಿಸಿ, ಬೆಳೆಸಿ, ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ” ಎಂದು ಹೇಳಿದರು. 10ನೇ ತರಗತಿಯ ವಿದ್ಯಾರ್ಥಿಗಳು ರಸಪ್ರಶ್ನೆ, ಐತಿಹಾಸಿಕ ಸ್ಥಳಗಳ ಚಿತ್ರ ಪ್ರದರ್ಶನ, ಕಿರು ಪ್ರಹಸನ, ಭಾಷಣ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಐತಿಹಾಸಿಕ ಸ್ಮಾರಕಗಳನ್ನು ಸ್ವಚ್ಛವಾಗಿರಿಸಿ, ಸಂರಕ್ಷಿಸುವ ಬಗ್ಗೆ ಸಂದೇಶವನ್ನು ನೀಡಿದರು. ಅಖಿಲಾ ಬಾಳಿಗಾ ಇವರು ಕಾರ್ಯಕ್ರಮ ನಿರ್ವಹಿಸಿದರು.
DSC01345

By suddi9

Leave a Reply

Your email address will not be published. Required fields are marked *