ಮೂಡುಬಿದಿರೆ: ಜಿಲ್ಲಾಡಳಿತದ ನಿದರ್ೇಶನದಂತೆ ಮರಳು ಸಾಗಾಟದ ಲಾರಿಗಳನ್ನು ತಪಾಸಣೆ ನಡೆಸುತ್ತಿದ್ದು, ಮೂಡುಬಿದಿರೆ ತಹಸೀಲ್ದಾರ್ ಮಹಮ್ಮದ್ ಇಸಾಕ್ ನೇತೃತ್ವದ ತಂಡ ಅಕ್ರಮ ಮರಳು ಸಾಗಿಸುತ್ತಿದ್ದ 19 ಲಾರಿಗಳನ್ನು ವಶಪಡಿಸಿಕೊಂಡಿದ್ದು ಸುಮಾರು 70 ಸಾವಿರ ರೂ ದಂಡ ವಿಧಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಮಿಜಾರು ಬಳಿ ಅಕ್ರಮ ಮರಳು ಸಾಗಾಟದ ಲಾರಿಗಳ ತಪಾಸಣೆ ನಡೆಸುವ ಸಂದರ್ಭ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ. ಪರವಾನಗಿ ಇದ್ದರೂ ನಿಗದಿಗಿಂತ ಹೆಚ್ಚು ಮರಳು ತುಂಬಿಸಿ ಸಾಗಿಸುತ್ತಿದ್ದ ಲಾರಿಗಳನ್ನು ತಡೆದು ನಿಲ್ಲಿಸಿ ದಂಡ ವಿಧಿಸಲಾಗುತ್ತಿದೆ. ಯಾವುದೇ ಪರವಾನಗಿ ಇಲ್ಲದೆ ಅಕ್ರಮ ಮರಳು ಸಾಗಾಟ ಮಾಡಿದ್ದು ಪತ್ತೆಯಾದಲ್ಲಿ ಅಂತಹ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಿ ಜಪ್ತಿ ಮಾಡಲಾಗುವುದು ಎಂದು ತಹಸೀಲ್ದಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ.
