ಬಂಟ್ವಾಳ:ತಾಲ್ಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ರಾಷ್ಟ್ರೀಯ ಹೆದ್ದಾರಿ ಬಳಿ ಖಾಸಗಿ ಬಸ್ ಚಾಲಕನೊಬ್ಬ ಸರ್ಕಾರಿ ಬಸ್ ಚಾಲಕನನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಲ್ಲದೆ ಕೊಲ್ಲುವುದಾಗಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ನಗರ ಠಾಣೆ ಪೊಲೀಸರಿಗೆ ಶನಿವಾರ ದೂರು ಸಲ್ಲಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಪುತ್ತೂರಿನ ಸವಣೂರು ನಿವಾಸಿ, ಖಾಸಗಿ ಬಸ್ ಚಾಲಕ ಪ್ರಸಾದ್ ಎಂದು ಗುರುತಿಸಲಾಗಿದೆ. ಈತನು ಕಳೆದ ತಿಂಗಳು ಮಾ.27ರಂದು ಮಂಗಳೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ವೇಳೆ ಕುದ್ರೆಬೆಟ್ಟುವಿನಲ್ಲಿ ಸರ್ಕಾರಿ ಬಸ್ ಅಡ್ಡಗಟ್ಟಿ ಅದರ ಚಾಲಕ ಹೇಮಂತ್ ಎಂಬವರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *