ಬಂಟ್ವಾಳ: ತಾಲ್ಲೂಕಿನ ಅರಳ ಗ್ರಾಮದ ಮುಲ್ಲಾರಪಟ್ನ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರನ್ನು ಪ್ರೀತಿಸುವ ನಾಟಕವಾಡಿ ವ್ಯಕ್ತಿಯೊಬ್ಬ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ಸ್ಥಳೀಯ ನಿವಾಸಿ ಅಬ್ದುಲ್ ರಶೀದ್ ಎಂದು ಗುರುತಿಸಲಾಗಿದೆ. ಈತನು ಏ.1ರಿಂದ 20ತನಕ ಇಲ್ಲಿನ ನಿವಾಸಿ ವಿದೇಶದಲ್ಲಿ ಉದ್ಯೋಗದಲ್ಲಿರುವ ಅಲ್ತಾಫ್ ಎಂಬವರ ಪತ್ನಿ ಐಷಾ ಎಂಬವರನ್ನು ವಿವಾಹವಾಗುವುದಾಗಿ ನಂಬಿಸಿ ಬೇರೆ ಕಡೆಗೆ ಕರೆದುಕೊಂಡು ಹೋಗಿದ್ದನು. ಇದೇ ವೇಳೆ ಈಕೆಯನ್ನು ವಂಚಿಸಿ ಒಟ್ಟು 27 ಪವನ್ ಚಿನ್ನಾಭರಣ ದೋಚಿದ್ದಾನೆ ಎಂದು ಆರೋಪಿಸಿ ನೊಂದ ಮಹಿಳೆ ಐಷಾ ದೂರು ಸಲ್ಲಿಸಿರುವುದಾಗಿ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

 

By suddi9

Leave a Reply

Your email address will not be published. Required fields are marked *