ಬಂಟ್ವಾಳ: ದೇವಸ್ಥಾನ ಮತ್ತಿತರ ಧಾಮಿಕ ಕೇಂದ್ರಗಳು ಜನರನ್ನು ಸುಸಂಸ್ಕ್ರತರನ್ನಾಗಿಸುವುದರ ಜೊತೆಗೆ ಎಲ್ಲಾ ಧರ್ಮಗಳನ್ನೂ ಪ್ರೀತಿಸುವ ಧಾರ್ಮಿಕ ಸಮನ್ವಯತೆಗೆ ಹೆಚ್ಚಿನ ಒತ್ತು ನೀಡಿದಾಗ ಒಟ್ಟು ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ತಾಲ್ಲೂಕಿನ ಉಳಿ ಶ್ರೀ ವಿಷ್ಣುಮೂರ್ತಿ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.
ಧರ್ಮಸ್ಥಳ ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ, ಶುದ್ಧ ಮನಸ್ಸಿನಿಂದ ದೇವರನ್ನು ಪೂಜಿಸಿದಾಗ ಮಾತ್ರ ಭಗವಂತನು ಒಲಿಯುತ್ತಾನೆ ಎಂದರು.
ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಡಾ.ಚಿನ್ನಪ್ಪ ಗೌಡ ಧಾರ್ಮಿಕ ಉಪನ್ಯಾಸ ನೀಡಿದರು. ಜೀರ್ಣೋದ್ಧಾರ ಸಮಿತಿ ಸಂಚಾಲಕ ಯೋಗೀಂದ್ರ ಭಟ್ ಅವರು ಪ್ರಾಸ್ತಾವಿಕ ಮಾತನಾಡಿದರು. ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಗತಿಪರ ಕೃಷಿಕ ರಾಜೇಶ್ ನಾೈಕ್ ಉಳಿಪಾಡಿಗುತ್ತು, ಉದ್ಯಮಿ ರವಿ ಕಕ್ಯಪದವು, ಮಂಗಳೂರು ಶ್ರೀ ಕಾಳಿಕಾಂಬ ದೇವಸ್ಥಾನ ಆಡಳಿತ ಮೊಕ್ತೇಸರ ಕೆ.ಲೋಕೇಶ ಆಚಾರ್ಯ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿವೃತ್ತ ಪ್ರಬಂಧಕ ಪ್ರಭಾಕರ ಪೈ, ಕಕ್ಯಪದವು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಕಾರಿಂಜ ಕ್ಷೇತ್ರದ ಮಾಜಿ ಆಡಳಿತ ಧರ್ಮದರ್ಶಿ ಪಿ.ಜಿನರಾಜ ಆರಿಗ , ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್ ಮತ್ತಿತರರು ಶುಭ ಹಾರೈಸಿದರು.
ಸಮಿತಿ ಸದಸ್ಯ ರಾಜ್ ಕುಮಾರ್ ಬಳ್ಳಿ ಸ್ವಾಗತಿಸಿ, ಮುರಳೀಧರ್ ಭಟ್ ವಂದಿಸಿದರು. ದಿನೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
