ಬಂಟ್ವಾಳ: ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ನ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ ಅಲ್ಬರ್ಟ್ ಮೆನೆಜಸ್ ನರಿಕೊಂಬು ಆಯ್ಕೆಯಾಗಿದ್ದಾರೆ.

ರಾಜ್ಯ ಅರಣ್ಯ ಪರಿಸರ ಜೀವಿಶಾಸ್ತ್ರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರವರ ಆದೇಶದೊಂದಿಗೆ ಪಾಣೆ ಮಂಗಳೂರು ಬ್ಲಾಕ್ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ ಯವರ ಶಿಫಾರಸ್ಸಿನಂತೆ ಜಿಲ್ಲಾ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಎಂ.ಎಸ್.ಮಹಮ್ಮದ್ ರವರು ನೇಮಕಗೊಳಿಸಿರುತ್ತಾರೆ.
