ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳು ಸಾಗಾಟದ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರ ನಡೆದಿದೆ.

ಬಿ.ಸಿ.ರೋಡ್ ಕಡೆಯಿಂದ ಮರಳು ಹೇರಿಕೊಂಡು ಕಡೂರು ಕಡೆಗೆ ಸಾಗುತ್ತಿದ್ದ ಲಾರಿಗೆ ಎದುರು ಬದಿಯಿಂದ ಬರುತಿದ್ದ ಮರಳು ಸಾಗಾಟದ ಖಾಲಿ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಅಪಘಾತದಿಂದ ಲಾರಿ ಚಾಲಕರೊಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂದರ್ಭದಲ್ಲಿ ಕೆಲಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
