ಬಂಟ್ವಾಳ : ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಜಯಪ್ರಕಾಶ್ ಡಿ.ಆರ್ ರವರು ಕೋಲಾರ ಜಿಲ್ಲೆಯ ಕೆ.ಜಿ.ಎಫ್ ಗೆ ವರ್ಗಾವಣೆಗೊಂಡ ಸಂದರ್ಭದಲ್ಲಿ ಬಂಟ್ವಾಳ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ಜರಗಿತು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. , ಬೆಂಗಳೂರಿನ ಹಿರಿಯ ಸಿವಿಲ್ ನ್ಯಾಯಾಧೀಶೆ ಎರ್ಮಾಳ್ ಕಲ್ಪನಾ , ವಿನುತಾ ಜಯಪ್ರಕಾಶ್ , ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶ ಮಹೇಶ್ ಆರ್. , ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಚೆಂಗಪ್ಪ , ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಕಾರ್ಯದರ್ಶಿ ಚಂದ್ರಶೇಖರ ರಾವ್ ಪುಂಚಮೆ ಉಪಸ್ಥಿತರಿದ್ದರು.
