ಬಂಟ್ವಾಳ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾಗಿರಿ ಎಸ್ವಿಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸ್ವಾತಿ ಕೆ.ಭಟ್ 615 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿನಲ್ಲಿ ಸರ್ವ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಶಾಲೆಯ ಮಾಹಿತಿ ತಿಳಿಸಿದೆ.
1205btlph4 swathi_k_bhat
ಪರೀಕ್ಷೆಗೆ ಹಾಜರಾದ ಎಲ್ಲಾ 57ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. ನೂರು ಫಲಿತಾಂಶ ದಾಖಲಾಗಿದೆ. 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ.

ಪಾಣೆಮಂಗಳೂರು ಎಸ್.ಎಲ್.ಎನ್.ಪಿ. ನೂರು ಶೇ. ಫಲಿತಾಂಶ
ಬಂಟ್ವಾಳ, ಮೇ 12: ಪಾಣೆಮಂಗಳೂರು ಎಸ್.ಎಲ್.ಎನ್.ಪಿ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಸತತ 5ನೇ ಬಾರಿಗೆ ಶೇ. ನೂರು ಫಲಿತಾಂಶ ಪಡೆದುಕೊಂಡಿದೆ.
ಶಾಲೆಯಿಂದ ಪರೀಕ್ಷೆಗೆ ಹಾಜರಾದ 39 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ

ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯಿಂದ ಹಾಜರಾದ ಒಟ್ಟು 46 ಮಂದಿ ವಿದ್ಯಾರ್ಥಿಗಳಲ್ಲಿ ಎಲ್ಲರೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಿಸಿದ್ದಾರೆ. ಇಲ್ಲಿನ ವಿದ್ಯಾರ್ಥಿ ಗಳಾದ ಫಾತಿಮಾ ನುಸೈಬ- 612, ರಶ್ಮಿ ಆರ್. ಉಪಾಧ್ಯಾಯ- 609, ತೃಪ್ತಿ ಪಿ. ರೈ- 607, ಪ್ರೇಮ್ ಸಾಗರ್- 600 ಅಂಕ ಗಳಿಸಿದ್ದಾರೆ. ಇಲ್ಲಿನ ಕನ್ನಡ ಮಾಧ್ಯಮದಲ್ಲಿ ಹಾಜರಾದ ಒಟ್ಟು 74 ಮಂದಿ ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ದಾಖಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *