ಬಂಟ್ವಾಳ : ದ.ಕ. ಮತ್ತು ಉಡುಪಿ ಜಿಲ್ಲಾ ದಫ್ ಎಸೋಸಿಯೇಶನ್ ಹಾಗೂ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಪಾಣೆಮಂಗಳೂರು-ಆಲಡ್ಕ ಮರ್‍ಹೂಂ ಸಜಿಪ ಉಸ್ತಾದ್ ನಗರದ ಮರ್‍ಹೂಂ ಇಕ್ಬಾಲ್ ಮಾಸ್ಟರ್ ವೇದಿಕೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಬ್ಯಾರಿ ಕವಿಗೋಷ್ಠಿಯ ವೀಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮ ಮಂಗಳವಾರ ಬಂಟ್ವಾಳದಲ್ಲಿ ನಡೆಯಿತು.

ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ವೀಡಿಯೋ ಸಿಡಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭ ದಫ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಲತೀಫ್ ನೇರಳಕಟ್ಟೆ, ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ದಫ್ ಎಸೋಸಿಯೇಶನ್ ಕಾರ್ಯದರ್ಶಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು, ಸದಸ್ಯ ಮುಸ್ತಫಾ ಯು. ಆಲಡ್ಕ ಉಪಸ್ಥಿತರಿದ್ದರು.
