ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ – 2015 ಸಂದರ್ಭದಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಸಲುವಾಗಿ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ಆದೇಶ ಸಂಖ್ಯೆ 464/96/ಎ.ಎಲ್.ಒ.ಪಿ.ಎಲ್.ಎನ್ ದಿನಾಂಕ 13.03.1996 ರ ಅನ್ವಯ ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಸ್ತಾಸ್ತ್ರ ಪರವಾನಿಗೆ ಹೊಂದಿರುವ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಕೂಡಲೇ ಹತ್ತಿರದ ಪರವಾನಿಗೆ ಹೊಂದಿರುವ ಅಧಿಕೃತ ಕೋವಿ ಮದ್ದು ಗುಂಡು ವ್ಯಾಪಾರಿಗಳಲ್ಲಿ ಅಥವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವುದು. ಸದ್ರಿ ಠೇವಣಿ ಇಟ್ಟ ಶಸ್ತ್ರಾಸ್ತ್ರಗಳನ್ನು ಚುನಾವಣೆ ಫಲಿತಾಂಶ ಘೋಷಣೆಯಾದ ದಿನಾಂಕದಿಂದ ಒಂದು ವಾರದ ನಂತರ ಪರವಾನಿಗೆದಾರರು ಶಸ್ತ್ರಾಸ್ತ್ರಗಳನ್ನು ಪಡೆದುಕೊಳ್ಳುವುದು ಎಂಬುದಾಗಿ ಪತ್ರಿಕಾ ಪ್ರಕಟಣೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ. ಸಹಿಯಾಗಿದೆ/-
ದಿನಾಂಕ : 13.05.2015 ಪೊಲೀಸ್ ಉಪ ನಿರೀಕ್ಷಕರು
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ.

By suddi9

Leave a Reply

Your email address will not be published. Required fields are marked *