ಬಂಟ್ವಾಳ : ಗ್ರಾಮಾಭಿವೃದ್ಧಿಗಾಗಿ ಕಾಂಗ್ರೆಸ್ ಸರಕಾರಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಈಗಾಗಲೇ ಜನಮೆಚ್ಚುಗೆ ಗಳಿಸಿದೆ. ಈ ಅಭಿವೃದ್ಧಿ ಸಾಧನೆಗಳನ್ನು ಜನತೆಗೆ ತಲುಪಿಸುವ ಜವಾಬ್ದಾರಿಯನ್ನು ಕಾರ್ಯಕರ್ತರು ವಹಿಸಿಕೊಂಡು ಆ ಮೂಲಕ ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಗೆಲ್ಲಿಸಿ ಎಂದು ರಾಜ್ಯ ಅರಣ್ಯ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು.

ಅವರು ಶನಿವಾರ ಸಿದ್ಧಕಟ್ಟೆಯಲ್ಲಿ ನಡೆದ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾ.ಪಂ.ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
36 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮಹತ್ವಾಕಾಂಕ್ಷೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು ಸಂಗಬೆಟ್ಟು , ಕುಕ್ಕಿಪಾಡಿ, ಚೆನ್ನೈತ್ತೋಡಿ, ರಾಯಿ, ಪಂಜಿಕಲ್ಲು ಹಾಗೂ ಅಮ್ಟಾಡಿ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಿಗೆ ಇದರ ಪ್ರಯೋಜನ ಒದಗಲಿದೆ ಎಂದ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳಾದ ರಸ್ತೆ, ನೀರು, ವಿದ್ಯುತ್ ಮೊದಲಾದ ಸವಲತ್ತುಗಳನ್ನು ಒದಗಿಸಿ ಸಮಗ್ರ ಅಭಿವೃದ್ಧಿ ಸಾಸಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲು ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ.ಆಡಳಿತಕ್ಕೆ ಬರಬೇಕಾಗಿದೆ ಎಂದು ಹೇಳಿದರು.
ಬಂಟ್ವಾಳ ಪುರಸಭಾ ಯೋಜನಾ ಪ್ರಾಕಾರದ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ , ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲಿಯಾನ್, ಬಂಟ್ವಾಳ ಪರಿಶಿಷ್ಟ ಜಾತಿ – ಪಂಗಡಗಳ ವಿಭಾಗದ ಅಧ್ಯಕ್ಷ ಜನಾರ್ಧನ ಚಂಡ್ತಿಮಾರ್, ತಾ.ಪಂ.ಸದಸ್ಯ ಎಫ್ರೆಂ ಸಿಕ್ವೇರಾ, ಸಂಗಬೆಟ್ಟು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ದೇವಪ್ಪ ಕರ್ಕೇರ , ಪ್ರಮುಖರಾದ ರಿಯಾಝ್ ಹುಸೇನ್, ಸೀತಾರಾಮ ಶೆಟ್ಟಿ , ಉಮ್ಮರ್ ಫಾರೂಕ್, ಜಲಜ ಪೂಜಾರ್ತಿ , ಭುಜಬಲಿ ಕಂಬಳಿ, ಜೆರಾಲ್ಡ್ ಗೋವಿಯಸ್, ಜಯಕರ ಶೆಟ್ಟಿ , ವಿಜಯರಾಜ್ ಜೈನ್, ಸಂಜೀವ ಪೂಜಾರಿ, ಯಶೋಧರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರಭಾಕರ ಪ್ರಭು ಅವರು ಸ್ವಾಗತಿಸಿ, ವಂದಿಸಿದರು.
