ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಬಿಜೆಪಿ ನಾಯಕರ ಭಾವಚಿತ್ರ ಹೊಂದಿರುವ ಕರಪತ್ರ ಮುದ್ರಿಸಿ ಹಂಚುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ ಘಟನೆ ಸೋಮವಾರ ನಡೆದಿದೆ.
25btl-duru
ಅಮ್ಟಾಡಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷೆ ಬಬಿತಾ ಕೋಟ್ಯಾನ್ ಸಹಿತ ಇಲ್ಲಿನ ಒಂದು, ಎರಡು ಮತ್ತು ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಧರ್ಮಣ್ಣ ಬಂಗೇರ, ಹರೀಶ ಶೆಟ್ಟಿ, ರತ್ನಾವತಿ ಮಾರ್ಲ, ಯಶೋಧ, ಸುಧಾಕರ ಶೆಟ್ಟಿ, ಚೇತನ ಹೀಗೆ ಏಳು ಮಂದಿ ವಿರುದ್ಧ ದೂರು ಸಲ್ಲಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮತ್ತಿತರ ನಾಯಕರ ಭಾವಚಿತ್ರ ಹೊಂದಿರುವ ಕರಪತ್ರ ಹಂಚಿದ್ದಾರೆ. ಈ ನಡುವೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ವಿರುದ್ಧ ಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಸ್ಥಳೀಯ ತಾಲ್ಲೂಕು ಪಂಚಾಯಿತಿ ಸದಸ್ಯ ಎಪ್ರಿಯಂ ಸಿಕ್ವೇರ ಚುನಾವಣಾಧಿಕಾರಿ ಪರಮೇಶ್ವರ ಮೊಯಿಲಿ ಮತ್ತು ನೋಡೆಲ್ ಅಧಿಕಾರಿ ಸಿಪ್ರಿಯಾನ್ ಮಿರಾಂದ ಇವರಿಗೆ ಲಿಖಿತ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *