ಬಂಟ್ವಾಳ:ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್‍ಗಳಲ್ಲಿ ಸ್ಪರ್ಧಿಸುತ್ತಿರುವ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿದ್ದ ವೇಳೆ ಗ್ರಾಮೀಣ ಪ್ರದೇಶಕ್ಕೆ ರಸ್ತೆ, ನೀರು ಹಾಗೂ ಮೂಲ ಸೌಕರ್ಯವನ್ನು ಒದಗಿಸಿದ್ದು ಅದಕ್ಕಾಗಿ ಜನರು ಈ ಮೂಲಕ ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಭಾನುವಾರ ಅಮ್ಮುಂಜೆ, ಕರಿಯಂಗಳ, ಬಡಗಬೆಳ್ಳೂರು, ತಂಕಬೆಳ್ಳೂರು,ಅಮ್ಟಾಡಿಯಲ್ಲಿ ಬಿಜೆಪಿ ಪರ ಅಭ್ಯರ್ಥಿಗಳ ಪರ ಮತ ಯಾಚಿಸಿದರು. ಸೋಮವಾರ ಸಂಜೆ ತಾಲೂಕಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಜನತಾ ಕಾಲನಿ ಮೊದಲಾದೆಡೆ ಬಿಜೆಪಿ ಮುಖಂಡ ಉಳಿಪ್ಪಾಡಿಗುತ್ತು ರಾಜೇಶ್ ನಾಯಕ್ ರವರ ಜೊತೆಗೂಡಿ ಬಿಜೆಪಿ ಅಭ್ಯರ್ಥಿಗಳ ಪರ ಮನೆ ಮನೆ ತೆರಳಿ ಮತಯಾಚಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಬಡಜನರಿಗೆ ಬೇಕಾದ ವಿಮೆಯಂತಹ ಅದ್ಭುತ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಬಡವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಈ ಅಂಶಗಳನ್ನು ಗಮನಿಸಿ ಗ್ರಾಮೀಣ ಜನತೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರಾದ ಲಿಂಗಪ್ಪ ಗೌಡ, ರಘರಾಮ ಶೆಟ್ಟಿ, ಉದಯ ರಮಣ ಭಟ್, ಪುಷ್ಪ, ದಮಯಂತಿ ಮೊದಲಾದವರು ಇದ್ದರು
