ಬೆಂಗಳೂರು: ಮತದಾರರಿಗೆ ಹಂಚಲು ಅಕ್ರಮವಾಗಿ ಸಾಗಿಸುತ್ತಿದ್ದ 2 ಸಾವಿರಕ್ಕೂ ಹೆಚ್ಚು ಸೀರೆಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮುಂಜಾನೆ ಕ್ಯಾಂಟರ್’ನಲ್ಲಿ ಸೀರೆಗಳನ್ನು ಸಾಗಿಸುತ್ತಿದ್ದ ವೇಳೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಚೆಕ್ ಪೊಸ್ಟ್ ನಲ್ಲಿ ಪೊಲೀಸರು ವಾಹನವನ್ನು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

silk-sarees

ಈ ಸೀರೆಗಳ ಮೌಲ್ಯ 9 ಲಕ್ಷ ಎಂದು ಅಂದಾಜಿಸಲಾಗಿದ್ದು, ಸುಧಾಕರ್ ರಾವ್, ರಾಘವೇಂದ್ರ, ಎಂಬುವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಸೀರೆಗಳನ್ನು ದೊಡ್ಡಬಳ್ಳಾಪುರದಿಂದ ಆಂಧ್ರದ ಚಿಲಕಲೂರು ಪೇಟೆಗೆ ಸಾಗಿಸುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

By suddi9

Leave a Reply

Your email address will not be published. Required fields are marked *