ಮೂಡುಬಿದರೆ: ಮೂಡುಬಿದರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕೆಸರುಗದ್ದೆಯಲ್ಲಿರುವ ಪಂಚಾಯಿತಿ ಕಚೇರಿ ಎದುರು ಮಂಗಳವಾರ ಸಂಜೆ ಬೈಕ್ ಮತ್ತು ಟೆಂಪೋ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಮೃತ ಪಟ್ಟಿದ್ದು ಸಹ ಸವಾರ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
mbd_june3_3 (3)

mbd_june3_3 (1)
ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರ ನಿವಾಸಿ ಬೈಕ್ ಸವಾರ್ ಕುಮಾರ್ (32ವ) ಮೃತಪಟ್ಟಿದ್ದು ಸಹ ಸವಾರ ಶ್ರೀಕಾಂತ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಬ್ಬರೂ ಸಂಬಂಧಿಕರಾಗಿದ್ದು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಮೂಡುಬಿದಿರೆ ಕಡೆಯಿಂದ ತಮ್ಮ ಊರಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಮೂಡುಬಿದರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *