ಮೂಡುಬಿದರೆ: ಅರಣ್ಯ ಇಲಾಖೆ ಮತ್ತು ಕಾರ್ಯನಿರತ ಪತ್ರಕರ್ತರ ಸಂಘ ಪ್ರೆಸ್ಕ್ಲಬ್ ಇವುಗಳ ಜಂಟಿ ಆಶ್ರಯದಲ್ಲಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಲಬೆಟ್ಟುವಿನಲ್ಲಿ ಶನಿವಾರ ಪರಿಸರ ದಿನಾಚರಣೆ ನಡೆಯಿತು. ಮೂಡುಬಿದರೆ ಪುರಸಭಾಧ್ಯಕ್ಷೆ ಸುಪ್ರಿಯಾ.ಡಿ.ಶೆಟ್ಟಿ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಾವು ನಮ್ಮ ಮುಂದಿನ ಪೀಳಿಗೆಯ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಪರಿಸರವನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಶಾಲಾ ಮಟ್ಟದಲ್ಲಿ ಆಯೋಜಿಸಿರುವುದು ಸೂಕ್ತವಾಗಿದೆ ಎಂದು ಹೇಳಿದರು.
mbd_june6_2
ವಲಯ ಅರಣ್ಯಾಧಿಕಾರಿ ಜಿ.ಡಿ ದಿನೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪರಿಸರ ದಿನಾಚರಣೆ ಮತ್ತು ಪರಿಸರವನ್ನು ಕಾಪಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.
ಮೂಡುಬಿದರೆ ಪ್ರೆಸ್ ಕ್ಲಬ್ ಉಪಾಧ್ಯಕ್ಷ ಬೆಳುವಾಯಿ ಸೀತಾರಾಮ ಆಚಾರ್ಯ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ವಿನಯ ಕುಮಾರ್ ಉಪಸ್ಥಿತರಿದ್ದರು.
ಮೂಡುಬಿದರೆ ಕೇಂದ್ರದ ಉಪ ವಲಯಾರಣ್ಯಾಧಿಕಾರಿ ಪ್ರಶಾಂತ್, ಮೂಡುಬಿದರೆ ಶಾಖೆಯ ಉಪವಲಯಾರಣ್ಯಾಧಿಕಾರಿ ಪ್ರಕಾಶ್ ಶೆಟ್ಟಿ, ಬಜಗೋಳಿಯ ಪ್ರಮೋದ್ ಕುಮಾರ್, ಅರಣ್ಯ ರಕ್ಷಕರಾದ ದಿವಾಕರ ರೈ, ರಮೇಶ್ ನಾಯ್ಕ್,ನಾಗರಾಜ, ಅರಣ್ಯ ವೀಕ್ಷಕರಾದ ಸುಧಾಕರ, ಕೊರಗಪ್ಪ ಮತ್ತು ನಾರಾಯಣ ಈ ಸಂದರ್ಭದಲ್ಲಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು.
ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರಸನ್ನ ಹೆಗ್ಡೆ ಸ್ವಾಗತಿಸಿದರು, ಖಜಾಂಜಿ ಪ್ರೇಮಶ್ರೀ ಕಲ್ಲಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಅನ್ವಯ ವಂದಿಸಿದರು.

By suddi9

Leave a Reply

Your email address will not be published. Required fields are marked *