ಬಂಟ್ವಾಳ: ವಿದ್ಯುತ್ ಗುತ್ತಿಗೆದಾರರ ಹಿತದೃಷ್ಟಿಯಲ್ಲಿ ಮೆಸ್ಕಾಂ ಗ್ರಾಹಕ ಸ್ನೇಹಿ ಯೋಜನೆಗಳನ್ನು ಹಮ್ಮಿಕೊಳ್ಳಬೇಕೆಂದು ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಉಬರ್ನ್ನ್ ಪಿಂಟೋ ಅವರು ಹೇಳಿದರು.
ಕರ್ನಾಟಕ ರಾಜ್ಯ ಅನುಪತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಬಂಟ್ವಾಳ ಉಪಸಮಿತಿಯ ನೂತನ ಕಾರ್ಯಾಲಯವನ್ನು ಬುಧವಾರ ಉದ್ಘಾಟಿಸಿ ಅವರು, ವಿದ್ಯುತ್ ಗುತ್ತಿಗೆದಾರರು ವಿದ್ಯುತ್ ಕಂಪನಿ ಹಾಗೂ ಗ್ರಾಹಕರ ನಡುವಿನ ಸಂಪರ್ಕ ಸೇತುವಿನಂತೆ ಕಾರ್ಯ ನಿರ್ವಹಿಸಬೇಕೆಂದು ಹೇಳಿದರು. ಮೆಸ್ಕಾಂ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್ ನಾರಾಯಣ ಭಟ್ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

KAR_5066 KAR_5069
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಂಟ್ವಾಳ ಉಪಸಮಿತಿ ಅಧ್ಯಕ್ಷ ಡಿ.ರಾಮಣ್ಣ ಬಂಗೇರ ಅವರು, ಗುತ್ತಿಗೆದಾರರು ಎದುರಿಸುತ್ತಿರುವ ಆಡಳಿತಾತ್ಮಕ ಸಂಬಂಧ ಸಮಸ್ಯೆಗಳ ಕುರಿತು ಗಮನ ಸೆಳೆದರು. ಜಿಲ್ಲಾ ಘಟಕದ ಉಪಾಧ್ಯಕ್ಷ ಸುಂದರ ಗೌಡ, ಕಾರ್ಯದರ್ಶಿ ಚೇತನ ಮಲ್ಯ, ಕೋಶಾಧಿಕಾರಿ ಶೈಲೇಶ್ ಮಲ್ಯ, ಸಂಘಟನಾ ಕಾರ್ಯದರ್ಶೀ ಸೂರ್ಯನಾಥ ಆಳ್ವ, ಕಾರ್ಯಕಾರಿ ಸಮಿತಿ ಸದಸ್ಯ ಎನ್.ಎ.ಯೂಸುಫ್, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಶೆಟ್ಟಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಬಂಟ್ವಾಳ ಉಪಸಮಿತಿ ಉಪಾಧ್ಯಕ್ಷ ಪದ್ಮನಾಭ ಮಯ್ಯ ಸ್ವಾಗತಿಸಿ, ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಸದಾಶಿವ ಬಂಗೇರ ವಂದಿಸಿದರು. ಹಾಜಿ ಇಬ್ರಾಹಿಂ ಸಜೀಪ ಕಾರ್ಯಕ್ರಮ ನಿರೂಪಿಸಿದರು.
ವಾರ್ಷಿಕ  ಮಹಾಸಭೆ: ಬಿ.ಸಿ.ರೋಡ್ ಚಿಕೋರಿ ಹೊಟೇಲ್ ಸಭಾಂಗಣದಲ್ಲಿ ವಿದ್ಯುತ್ ಗುತ್ತಿಗೆದಾರರ ಸಂಘದ ಬಂಟ್ವಾಳ ಉಪಸಮಿತಿಯ ವಾರ್ಷಿಕ ಮಹಾಸಭೆ ನಡೆಯಿತು. ಅಧ್ಯಕ್ಷ ರಾಮಣ್ಣ ಬಂಗೇರ ಅವರ ಅಧ್ಯಕ್ಷತೆ ವತಿಸಿದರು. ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಅವರು ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಬಿ.ಪರಮೇಶ್ವರ್ ಅವರು ಲೆಕ್ಕ ಪತ್ರ ಮಂಡಿಸಿದರು. ಹಗ್ಗಜಗ್ಗಾಟ, ಕ್ರಿಕೇಟ್ ವಿಜೇತ ತಂಡದ ಸದಸ್ಯರಿಗೆ ಪುರಸ್ಕರಿಸಲಾಯಿತು. ಸಂಘದ ನಿಕಟಪೂರ್ವ ಅಧ್ಯಕ್ಷ ಲಕ್ಷ್ಮೀ ನಾರಾಯಣ ಅವರನ್ನು ಸನ್ಮಾನಿಸಲಾಯಿತು. ಸದಸ್ಯ ಅಕ್ಬರ್ ಸಜೀಪ ಅನಿಸಿಕೆ ವ್ಯಕ್ತಪಡಿಸಿದರು.

By Suddi9

Leave a Reply

Your email address will not be published. Required fields are marked *