ಬಂಟ್ವಾಳ:ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಕಾವಳಮೂಡೂರು ಗ್ರಾಮದ ಎನ್.ಸಿ.ರೋಡ್ ಎಂಬಲ್ಲಿ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಗಾಯಾಳುಗಳನ್ನು ಮಂಗಳೂರಿನ ಪಾವೂರು ನಿವಾಸಿ ಇಮ್ರಾನ್ ಮತ್ತು ಅವರ ತಂದೆ ಖಾಸಿಂ ಎಂದು ಗುರುತಿಸಲಾಗಿದೆ. ಇವಬ್ಬರಿಗೂ ಕೈ ಮತ್ತು ಕಾಲು ಮೂಳೆ ಮುರಿತಕ್ಕೀಡಾಗಿದ್ದು, ತಲೆಗೂ ಗಂಭೀರ ಗಾಯಗೊಂಡ ಪರಿಣಾಮ ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಮ್ರಾನ್ ಬೈಕ್ ಚಲಾಯಿಸುತ್ತಿದ್ದು, ಇವರಿಬ್ಬರು ಮಂಗಳವಾರ ಸಂಜೆ ಎಂದಿನಂತೆ ಕೆಲಸ ಮುಗಿಸಿ ಮಂಗಳೂರಿನ ಕಡೆಗೆ ಹೋಗುತ್ತಿದ್ದ ವೇಳೆ ಬಿ.ಸಿ.ರೋಡ್ನಿಂದ ಬರುತ್ತಿದ್ದ ಪಿಕಪ್ ವಾಹನ ಡಿಕ್ಕಿಯಾಗಿದೆ ಎಂದು ಪುಂಜಾಲಕಟ್ಟೆ ಠಾಣೆ ಪೊಲೀಸರು ತಿಳಿಸಿದ್ದಾರೆ.

By Suddi9

Leave a Reply

Your email address will not be published. Required fields are marked *