ಬಂಟ್ವಾಳ: ಅವಿಭಜಿತ ಜಿಲ್ಲೆಯಲ್ಲಿ ಇರ್ವತ್ತೂರು ಪದವು ಹಾಲು ಉತ್ಪಾದಕರ ಸಹಕಾರಿ ಸಂಘವು ಗುಣಮಟ್ಟದ ಹಾಲು ಸಂಗ್ರಹದಲ್ಲಿ ನಂ.1 ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಶುದ್ಧ ಮತ್ತು ಗುಣಮಟ್ಟದ ಹಾಲು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ ಹೆಗ್ಡೆ ಹೇಳಿದ್ದಾರೆ.
ತಾಲ್ಲೂಕಿನ ಇರ್ವತ್ತೂರು ಪದವು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನಿರ್ಮಾಣಗೊಂಡ ‘ಅಮೃತ ಮಹಲ್’ ನೂತನ ಕಟ್ಟಡವನ್ನು ಬುಧವಾರ ಉದ್ಗಾಟಿಸಿ ಅವರು ಮಾತನಾಡಿದರು.
‘ಅಮೃತ ಮಹಲ್’ ನೂತನ ಕಟ್ಟಡ ಉದ್ಘಾಟನೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಸಂಚಾಲಕ ಡಾ.ಕೆ.ಪ್ರಭಾಕರ ಭಟ್ ಅವರು ನೂತನ ಕಚೇರಿ ಉದ್ಘಾಟಿಸಿ ಮಾತನಾಡಿ, ಸ್ವದೇಶಿ ತಳಿ ಹಸುಗಳ ಹಾಲು ತಾಯಿ ಹಾಲಿನಂತೆ ಶ್ರೇಷ್ಠವಾಗಿದ್ದು, ಇದಕ್ಕಾಗಿ ಸ್ವದೇಶಿ ಗೋಸಂತತಿ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಬೆಂಗಳೂರು ಸೌಹಾರ್ದ ಸಹಕಾರಿ ಫೆಡರೇಶನ್ ನಿರ್ದೇಶಕ ಎಸ್.ಆರ್.ಸತೀಶ್ಚಂದ್ರ ಹಾಲು ಶೇಖರಣಾ ಘಟಕ ಉದ್ಘಾಟಿಸಿದರು. ಇರ್ವತ್ತೂರು ಪದವು ಸಂಘದ ಅಧ್ಯಕ್ಷ ಕೆ. ಲಕ್ಷ್ಮಿನಾರಾಯಣ ಉಡುಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಹಾಲು ಒಕ್ಕೂಟ ನಿರ್ದೇಶಕರಾದ ಡಾ.ಕೆ.ಎಂ.ಕೃಷ್ಣ ಭಟ್, ರವೀಂದ್ರ ಕಂಬಳಿ, ಕೆ.ಪಿ.ಸುಚರಿತ ಶೆಟ್ಟಿ, ವೀಣಾ ಆರ್.ರೈ, ನರಹರಿ ಪ್ರಭು, ಜಿ.ಪಂ.ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ವಾಮದಪದವು ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ, ಉದ್ಯಮಿ ಅಬ್ದುಲ್ ನಝೀರ್ ಸಾಹೇಬ್, ಸಂಘದ ಕಾರ್ಯದರ್ಶಿ ಹೇಮಚಂದ್ರ ಶೆಟ್ಟಿ ಮತ್ತಿತರರು ಇದ್ದರು. ಇದೇ ವೇಳೆ ಸ್ಥಳದಾನಿ ಅಬ್ದುಲ್ ನಝೀರ್ ಸಾಹೇಬ್ ಮತ್ತು ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಎಂ. ಬೂಬ ಸಪಲ್ಯ ಇವರನ್ನು ಸಮ್ಮಾನಿಸಲಾಯಿತು. ಕೆ.ಬೂಬ ಕುದ್ಕಂದೋಡಿ ಸ್ವಾಗತಿಸಿ, ಡಾ.ರಾಮಕೃಷ್ಣ ಎಸ್. ಪ್ರಾಸ್ತಾವಿಕ ಮಾತನಾಡಿದರು. ನಿರ್ದೇಶಕ ಪ್ರಶಾಂತ್ ಕೋಟ್ಯಾನ್ ಮೇಗಿನಮನೆ ವಂದಿಸಿದರು. ರಂಗಕಲಾವಿದ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.
